ADVERTISEMENT

ಆನ್‌ಲೈನ್‌ ಗೇಮಿಂಗ್‌: ಇಂದಿನಿಂದ ಶೇ 28ರಷ್ಟು ಜಿಎಸ್‌ಟಿ

ಪಿಟಿಐ
Published 30 ಸೆಪ್ಟೆಂಬರ್ 2023, 16:31 IST
Last Updated 30 ಸೆಪ್ಟೆಂಬರ್ 2023, 16:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕ್ಯಾಸಿನೊ, ಕುದುರೆ ರೇಸ್‌ ಮತ್ತು ಆನ್‌ಲೈನ್‌ ಆಟಗಳಿಗೆ ಶೇ 28ರಷ್ಟು ಜಿಎಸ್‌ಟಿಯನ್ನು ಅಕ್ಟೋಬರ್‌ 1ರಿಂದ ಜಾರಿಗೊಳಿಸುವ ಕುರಿತು ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಜಿಎಸ್‌ಟಿ ಕಾಯ್ದೆಯಲ್ಲಿ ತಂದಿರುವ ಬದಲಾವಣೆಗಳ ಪ್ರಕಾರ, ಆನ್‌ಲೈನ್‌ ಆಟಗಳು ಹಾಗೂ ಕ್ಯಾಸಿನೊಗಳಲ್ಲಿ ಪೂರ್ಣ ಬೆಟ್ಟಿಂಗ್‌ ಮೊತ್ತದ ಮೇಲೆ ಶೇಕಡ 28ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ.

ಸಮಗ್ರ ಜಿಎಸ್‌ಟಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶದ ಇ–ಗೇಮಿಂಗ್ ಕಂಪನಿಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ದೇಶಿ ಕಾನೂನಿಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.