ನವದೆಹಲಿ: ‘ಬಜೆಟ್‌ನಲ್ಲಿ ಘೋಷಿಸಲಾದ ವಿತ್ತೀಯ ಮತ್ತು ಹಣಕಾಸಿನ ಕ್ರಮಗಳು ಜನರಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲು ಸಹಾಯ ಮಾಡಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸರ್ಕಾರ ಮತ್ತು ಆರ್‌ಬಿಐ ದೇಶದ ಪ್ರಗತಿ ಹೆಚ್ಚಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡಲಿವೆ. ಇವೆರೆಡರ ನಡುವೆ (ಸರ್ಕಾರ ಮತ್ತು ಆರ್‌ಬಿಐ) ಉತ್ತಮ ಸಮನ್ವಯವಿದೆ ಎಂದು ಹೇಳಿದರು.
ಪ್ರಸಕ್ತ ವರ್ಷದ ಏಪ್ರಿಲ್-ಜೂನ್‌ಗಾಗಿ ಗ್ರಾಹಕ ಸರಕುಗಳಿಗೆ (ಎಫ್‌ಎಂಸಿಜಿ) ಬೇಡಿಕೆಗಳು ಈಗಾಗಲೇ ಸಲ್ಲಿಕೆ ಆಗಿವೆ. ಇದು ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ತೋರಿಸುತ್ತದೆ ಎಂದು ಶನಿವಾರ ನಡೆದ ಆರ್‌ಬಿಐನ ಮಂಡಳಿಯ ಸಭೆ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.
ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಂಡಿಸಿದ 2025–26ನೇ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಲು ₹12.75 ಲಕ್ಷದವರೆಗೆ ಆದಾಯಕ್ಕೆ ತೆರಿಗೆ ಇಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದರು. ಇದರಿಂದ 1 ಕೋಟಿ ತೆರಿಗೆದಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದರು.
ಶುಕ್ರವಾರ ನಡೆದ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು, 5 ವರ್ಷಗಳ ಬಳಿಕ ರೆಪೊ ದರದಲ್ಲಿ ಶೇ0.25ರಷ್ಟು ಕಡಿತಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.