ADVERTISEMENT

₹ 9.53 ಲಕ್ಷ ಕೋಟಿ ತಲುಪಿದ ವಿತ್ತೀಯ ಕೊರತೆ

ಪಿಟಿಐ
Published 27 ನವೆಂಬರ್ 2020, 21:01 IST
Last Updated 27 ನವೆಂಬರ್ 2020, 21:01 IST

ನವದೆಹಲಿ: ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು ಅಕ್ಟೋಬರ್‌ ಅಂತ್ಯದ ವೇಳೆಗೆ ₹ 9.53 ಲಕ್ಷ ಕೋಟಿಗೆ ಹಿಗ್ಗಿದೆ. ಇದು ವಾರ್ಷಿಕ ಬಜೆಟ್‌ ಅಂದಾಜಿನ ಸರಿಸುಮಾರು ಶೇಕಡ 120ರಷ್ಟು.

ಸೆಪ್ಟೆಂಬರ್‌ ಅಂತ್ಯದ ವೇಳೆಗೆ ವಿತ್ತೀಯ ಕೊರತೆಯು ಬಜೆಟ್ ಅಂದಾಜಿನ ಶೇಕಡ 114.8ರಷ್ಟು ಇತ್ತು ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿ–ಅಂಶಗಳು ಹೇಳುತ್ತಿವೆ.

ಫೆಬ್ರುವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವರ್ಷದ ವಿತ್ತೀಯ ಕೊರತೆಯು ₹ 7.96 ಲಕ್ಷ ಕೋಟಿ ಇರಲಿದೆ ಎಂದು ಅಂದಾಜಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.