ADVERTISEMENT

ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಅಂತರ ಹೆಚ್ಚಳ

ಪಿಟಿಐ
Published 29 ನವೆಂಬರ್ 2024, 13:33 IST
Last Updated 29 ನವೆಂಬರ್ 2024, 13:33 IST
ವಿತ್ತೀಯ ಕೊರತೆ
ವಿತ್ತೀಯ ಕೊರತೆ   

ನವದೆಹಲಿ: 2024–25ರ ಹಣಕಾಸು ವರ್ಷದ ಮೊದಲ ಏಳು ತಿಂಗಳಲ್ಲಿ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 46.5ರಷ್ಟು ಆಗಿದೆ.

ವರಮಾನ ಮತ್ತು ವೆಚ್ಚದ ನಡುವಣ ಅಂತರವಾದ ವಿತ್ತೀಯ ಕೊರತೆಯು ಅಕ್ಟೋಬರ್ ಅಂತ್ಯಕ್ಕೆ ₹7.50 ಲಕ್ಷ ಕೋಟಿಯಷ್ಟಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರು (ಸಿಜಿಎ) ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

2023–24ನೇ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯು ಶೇ 5.6ರಷ್ಟಿತ್ತು. 2024–25ನೇ ಆರ್ಥಿಕ ವರ್ಷದಲ್ಲಿ ಇದನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 4.9ಕ್ಕೆ ತಗ್ಗಿಸಲು ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಗುರಿ ನಿಗದಿಪಡಿಸಿದೆ. ಮೌಲ್ಯದ ಲೆಕ್ಕದಲ್ಲಿ ಇದು ₹16.13 ಲಕ್ಷ ಕೋಟಿ ಆಗಿದೆ. 

ADVERTISEMENT

ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಒಟ್ಟು ₹13 ಲಕ್ಷ ಕೋಟಿ ನಿವ್ವಳ ತೆರಿಗೆ ವರಮಾನ ಸಂಗ್ರಹವಾಗಿದೆ. ಇದೇ ಅವಧಿಯಲ್ಲಿ ಸರ್ಕಾರದ ವೆಚ್ಚವು ₹24.7 ಲಕ್ಷ ಕೋಟಿ ಆಗಿದೆ. ಇದು ಬಜೆಟ್‌ ಅಂದಾಜಿನ ಶೇ 51ರಷ್ಟು ಆಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.