
ರೂಪಾಯಿ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ನವೆಂಬರ್‌ವರೆನ ಅವಧಿಯಲ್ಲಿ ಕೇಂದ್ರ ಸರ್ಕಾರದ ವರಮಾನ ಮತ್ತು ವೆಚ್ಚದ ನಡುವಿನ ಅಂತರವಾದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 62.3ರಷ್ಟಾಗಿದೆ.
ಹಣದ ಮೌಲ್ಯದ ಲೆಕ್ಕದಲ್ಲಿ ಇದು ₹9.76 ಲಕ್ಷ ಕೋಟಿಯಾಗಿದೆ ಎಂದು ಬುಧವಾರ ಬಿಡುಗಡೆ ಆಗಿರುವ ಮಹಾಲೇಖಪಾಲರ (ಸಿಜಿಎ) ವರದಿ ತಿಳಿಸಿದೆ. 2024–25ರ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿತ್ತೀಯ ಕೊರತೆಯು ಶೇ 52.5ರಷ್ಟಿತ್ತು.
2025–26ರ ಆರ್ಥಿಕ ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 4.4ಕ್ಕೆ (ಹಣಕಾಸಿನ ಮೌಲ್ಯದ ಲೆಕ್ಕದಲ್ಲಿ ₹15.69 ಲಕ್ಷ ಕೋಟಿ) ತಗ್ಗಿಸಲು ಸರ್ಕಾರ ಬಜೆಟ್‌ನಲ್ಲಿ ಗುರಿ ನಿಗದಿ ಮಾಡಿದೆ.
ಏಪ್ರಿಲ್‌ನಿಂದ ನವೆಂಬರ್‌ವರೆಗೆ ಸರ್ಕಾರವು ₹19.49 ಲಕ್ಷ ಕೋಟಿ (ಬಜೆಟ್ ಅಂದಾಜಿನ ಶೇ 55.7ರಷ್ಟು) ವರಮಾನ ಸ್ವೀಕರಿಸಿದೆ. ಇದೇ ಅವಧಿಯಲ್ಲಿ ಸರ್ಕಾರದ ಒಟ್ಟು ವೆಚ್ಚವು ₹29.25 ಲಕ್ಷ ಕೋಟಿ (ಬಜೆಟ್ ಅಂದಾಜಿನ ಶೇ 57.8) ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.