ನವದೆಹಲಿ: 2024-25ನೇ ಆರ್ಥಿಕ ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ಕೇಂದ್ರ ಸರ್ಕಾರದ ವರಮಾನ ಮತ್ತು ವೆಚ್ಚದ ನಡುವಿನ ಅಂತರವಾದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 56.7ರಷ್ಟಾಗಿದೆ.
ಮೌಲ್ಯದ ಲೆಕ್ಕದಲ್ಲಿ ಇದು ₹9.14 ಲಕ್ಷ ಕೋಟಿಯಾಗಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರ (ಸಿಜಿಎ) ವರದಿ ಶುಕ್ರವಾರ ತಿಳಿಸಿದೆ.
ಏಪ್ರಿಲ್ನಿಂದ ಡಿಸೆಂಬರ್ ಅವಧಿಯಲ್ಲಿ ₹18.43 ಲಕ್ಷ ಕೋಟಿ ನಿವ್ವಳ ತೆರಿಗೆ ಸಂಗ್ರಹವಾಗಿದೆ. ಇದೇ ಅವಧಿಯಲ್ಲಿ ಸರ್ಕಾರದ ಒಟ್ಟು ವೆಚ್ಚ ₹32 ಲಕ್ಷ ಕೋಟಿಗೆ (ಶೇ 67ರಷ್ಟು) ಮುಟ್ಟಿದೆ.
2023–24ರಲ್ಲಿ ವಿತ್ತೀಯ ಕೊರತೆಯು ಶೇ 5.6ರಷ್ಟಿತ್ತು. 2024–25ರಲ್ಲಿ ಇದನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 4.9ಕ್ಕೆ ತಗ್ಗಿಸಲು ಸರ್ಕಾರವು ಬಜೆಟ್ನಲ್ಲಿ ಗುರಿ ನಿಗದಿಪಡಿಸಲಾಗಿದೆ. ಇದು ಮೌಲ್ಯದ ಲೆಕ್ಕದಲ್ಲಿ ₹16.13 ಲಕ್ಷ ಕೋಟಿ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.