ರಾಜ್ಯಪಾಲ ಥಾವರಚಂದ್ ಗೆಹಲೋತ್
ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಿಂದ (ಎಫ್‌ಕೆಸಿಸಿಐ) ನಗರದಲ್ಲಿ ಜನವರಿ 8ರಂದು ಮಹಾಸಂಸ್ಥೆಯ 17ನೇ ಆವೃತ್ತಿಯ ಮಂಥನ್ ಮತ್ತು 20ನೇ ಆವೃತ್ತಿಯ ಎಕ್ಸ್‌ಪೋರ್ಟ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಮಹಾಸಂಸ್ಥೆಯ ಸರ್ ಎಂ.ವಿ. ಸಭಾಂಗಣದಲ್ಲಿ ಬೆಳಿಗ್ಗೆ 11ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಡಾ.ಸಿ.ಎನ್. ಮಂಜುನಾಥ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.