ಬೆಂಗಳೂರು: ಫ್ಲಿಪ್‌ಕಾರ್ಟ್ ಕಂಪನಿಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ‘ಗ್ರಿಡ್ 5.0’ ಸ್ಪರ್ಧೆಯನ್ನು ಆಯೋಜಿಸುತ್ತಿದ್ದು, ಇದರಲ್ಲಿ ಭಾಗವಹಿಸಿ ಜಯ ಗಳಿಸುವವರಿಗೆ ಫ್ಲಿಪ್‌ಕಾರ್ಟ್‌ನಲ್ಲಿ ತರಬೇತಿ ಪಡೆಯುವ, ಕಂಪನಿಯಲ್ಲಿ ಕೆಲಸ ಮಾಡುವ ಅವಕಾಶ ಸಿಗುವ ಸಾಧ್ಯತೆ ಇರುತ್ತದೆ.
2024, 2025, 2026 ಮತ್ತು 2027ನೆಯ ಬ್ಯಾಚ್‌ನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು.
ಸಾಫ್ಟ್‌ವೇರ್ ಅಭಿವೃದ್ಧಿ, ಮಾಹಿತಿ ಭದ್ರತೆ, ರೊಬಿಟಿಕ್ಸ್ ಮತ್ತು ಹೆಲ್ತ್+ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವವರು ಇ–ವಾಣಿಜ್ಯ ಉದ್ಯಮದ ಸಮಸ್ಯೆಗಳನ್ನು ಪರಿಹರಿಸುವ ಮಾದರಿಗಳನ್ನು ಪ್ರಸ್ತುತಪಡಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತರು https://unstop.com ವೆಬ್‌ಸೈಟ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.