ADVERTISEMENT

ಅಗತ್ಯ ವಸ್ತುಗಳನ್ನು ಪೂರೈಸಲು ಫ್ಲಿಪ್‌ಕಾರ್ಟ್‌, ಉಬರ್‌ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 2:51 IST
Last Updated 7 ಏಪ್ರಿಲ್ 2020, 2:51 IST
   

ಬೆಂಗಳೂರು: ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಬೆಂಗಳೂರು, ಮುಂಬೈ ಮತ್ತು ದೆಹಲಿಯ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಇ–ಕಾಮರ್ಸ್‌ನ ಫ್ಲಿಪ್‍ಕಾರ್ಟ್ ಮತ್ತು ಬಾಡಿಗೆ ಟ್ಯಾಕ್ಸಿ ಕಂಪನಿ ಉಬರ್ ಒಪ್ಪಂದ ಮಾಡಿಕೊಂಡಿವೆ.

ಫ್ಲಿಪ್‍ಕಾರ್ಟ್ ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಗಳ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಇದರಿಂದ ಸಾಧ್ಯವಾಗಲಿದೆ. ಆರ್ಥಿಕತೆ ಮುನ್ನಡೆಯಲೂ ಈ ಪಾಲುದಾರಿಕೆ ನೆರವಾಗಲಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ ಎಲ್ಲಾ ಚಾಲಕರಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅವರಿಗೆ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಅನ್ನು ನೀಡಲಾಗುತ್ತಿದ್ದು, ಸುರಕ್ಷತೆಯ ಬಗ್ಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ ಎಂದು ಉಬರ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT