ADVERTISEMENT

ವಂಚನೆ ವಿರುದ್ಧ ತ್ವರಿತ ಕ್ರಮಕ್ಕೆ ನಿರ್ಮಲಾ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2023, 16:17 IST
Last Updated 9 ಜುಲೈ 2023, 16:17 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್    

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ವಂಚನೆ ಪ್ರಕರಣಗಳಲ್ಲಿ ಹಾಗೂ ಉದ್ದೇಶಪೂರ್ವಕ ಸುಸ್ತಿದಾರರ ವಿಚಾರದಲ್ಲಿ ತ್ವರಿತವಾಗಿ ಕ್ರಮ ಜರುಗಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬ್ಯಾಂಕ್‌ಗಳು ಆರು ವರ್ಷಗಳಲ್ಲಿ (2021–22ನೆಯ ಆರ್ಥಿಕ ವರ್ಷದವರೆಗೆ) ಒಟ್ಟು ₹11.17 ಲಕ್ಷ ಕೋಟಿ ವಸೂಲಾಗದ ಸಾಲವನ್ನು ರೈಟ್‌ ಆಫ್ ಮಾಡಿವೆ. ನಿರ್ಮಲಾ ಅವರು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮುಖ್ಯಸ್ಥರ ಜೊತೆ ಈಚೆಗೆ ಸಭೆ ನಡೆಸಿದ್ದಾರೆ.

ಎಚ್‌ಡಿಎಫ್‌ಸಿ ಲಿಮಿಟೆಡ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ ವಿಲೀನ ಆಗಿರುವ ಪರಿಣಾಮವಾಗಿ, ಠೇವಣಿಗಳನ್ನು ಸಂಗ್ರಹಿಸುವ ವಿಚಾರದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಹೆಚ್ಚಿನ ಸ್ಪರ್ಧೆ ಎದುರಾಗಬಹುದು ಎಂಬ ವಿಚಾರ ಸಭೆಯಲ್ಲಿ ಪ್ರಸ್ತಾಪವಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.