ADVERTISEMENT

ಜಿಎಸ್‌ಟಿ ಪರಿಷ್ಕರಣೆಯಿಂದಾಗಿ ಎಫ್‌ಎಂಸಿಜಿ ಉತ್ಪನ್ನಗಳ ಬೆಲೆ ಇಳಿಕೆ

ಪಿಟಿಐ
Published 18 ಸೆಪ್ಟೆಂಬರ್ 2025, 21:12 IST
Last Updated 18 ಸೆಪ್ಟೆಂಬರ್ 2025, 21:12 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಪ್ರಮುಖ ಎಫ್‌ಎಂಸಿಜಿ ಕಂಪನಿಗಳು ಜಿಎಸ್‌ಟಿ ಪರಿಷ್ಕರಣೆಯಿಂದಾಗಿ ತಮ್ಮ ಉತ್ಪನ್ನಗಳ ಬೆಲೆ ಎಷ್ಟರಮಟ್ಟಿಗೆ ಇಳಿಕೆ ಆಗುತ್ತದೆ ಎನ್ನುವುದನ್ನು ಪ್ರಕಟಿಸಿವೆ. ಹೊಸ ದರವು ಸೆಪ್ಟೆಂಬರ್‌ 22ರಿಂದ ಜಾರಿಗೆ ಬರಲಿದೆ.

ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್, ಇಮಾಮಿ ಮತ್ತು ಎಚ್‌ಯುಎಲ್‌ ಕಂಪನಿಗಳು ಬೆಲೆ ಇಳಿಕೆ ಮಾಡಿದ್ದು, ಈ ಮಾಹಿತಿಯನ್ನು ವಿತರಕರಿಗೆ ತಿಳಿಸಿವೆ. ಅಲ್ಲದೆ, ಹೊಸ ದರ ಪಟ್ಟಿಯನ್ನು ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಿವೆ. ಜಿಎಸ್‌ಟಿ ಪರಿಷ್ಕರಣೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲು ಕಂಪನಿಗಳು ಮುಂದಾಗಿವೆ.

ಸಾಬೂನು, ಶ್ಯಾಂಪೂ, ಮಕ್ಕಳ ಡೈಪರ್‌ಗಳು, ಟೂತ್‌ಪೇಸ್ಟ್‌, ರೇಜರ್‌ಗಳು, ಶೇವಿಂಗ್‌ ನಂತರದ ಲೋಷನ್‌ ಸೇರಿ ಹಲವು ಉತ್ಪನ್ನಗಳ ಬೆಲೆ ಇಳಿಕೆಯಾಗಲಿವೆ ಎಂದು ಕಂಪನಿಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.