ADVERTISEMENT

ತಾಂತ್ರಿಕ ದೋಷ: ಸ್ವಿಗ್ಗಿ, ಜೊಮ್ಯಾಟೊ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಏಪ್ರಿಲ್ 2022, 10:33 IST
Last Updated 6 ಏಪ್ರಿಲ್ 2022, 10:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆಹಾರ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜನಪ್ರಿಯ ಅಪ್ಲಿಕೇಶನ್‌ಗಳಾದ ಜೊಮ್ಯಾಟೊ ಮತ್ತು ಸ್ವಿಗ್ಗಿ ಸೇವೆಯಲ್ಲಿ ಬುಧವಾರ ಮಧ್ಯಾಹ್ನ ತಾತ್ಕಾಲಿಕ ವ್ಯತ್ಯಯ ಕಂಡುಬಂದಿದೆ.

ಈ ಎರಡು ಅಪ್ಲಿಕೇಶನ್‌ಗಳು ಅರ್ಧ ಗಂಟೆ ಕಾಲ ಸೇವೆಯನ್ನು ಸ್ಥಗಿತಗೊಳಿಸಿದ್ದವು. ಸೇವೆ ವ್ಯತ್ಯಯದ ಬಗ್ಗೆ ಹಲವಾರು ಬಳಕೆದಾರರು ಸಾಮಾಜಿಕ ಮಾಧ್ಯಮಗಳ ಮೂಲಕ ದೂರು ನೀಡಿದ್ದಾರೆ.

ಬಳಕೆದಾರರಿಗೆ ಪ್ರತಿಕ್ರಿಯಿಸಿರುವ ಸ್ವಿಗ್ಗಿ, ಜೊಮ್ಯಾಟೊ ಕಂಪನಿಗಳು ತಾತ್ಕಾಲಿಕ ತಾಂತ್ರಿಕ ದೋಷವನ್ನು ಎದುರಿಸುತ್ತಿರುವ ಕುರಿತು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.