ADVERTISEMENT

ಆಹಾರ ಸಂಸ್ಕರಣಾ ಸಾಮರ್ಥ್ಯ 20 ಪಟ್ಟು ಹೆಚ್ಚಳ: ನರೇಂದ್ರ ಮೋದಿ

ಪಿಟಿಐ
Published 25 ಸೆಪ್ಟೆಂಬರ್ 2025, 15:55 IST
Last Updated 25 ಸೆಪ್ಟೆಂಬರ್ 2025, 15:55 IST
ಮೋದಿ
ಮೋದಿ   

ನವದೆಹಲಿ: ಕಳೆದ 10 ವರ್ಷದಲ್ಲಿ ದೇಶದ ಆಹಾರ ಸಂಸ್ಕರಣಾ ಸಾಮರ್ಥ್ಯವು 20 ಪಟ್ಟು ಹೆಚ್ಚಳವಾಗಿದೆ. ಜೊತೆಗೆ ಆಹಾರ ಪದಾರ್ಥಗಳ ರಫ್ತು ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಶ್ವ ಆಹಾರ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಆಹಾರ ಸಂಸ್ಕರಣಾ ವಲಯಕ್ಕೆ ಉತ್ತೇಜನ ನೀಡುತ್ತಿದೆ ಎಂದರು.

ಭಾರತದಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯ...ಆಹಾರ ಸಂಸ್ಕರಣಾ ವಲಯದಲ್ಲಿ ಹೂಡಿಕೆ ಮಾಡಲು ಬಾಗಿಲು ತೆರೆದಿವೆ. ಸಹಯೋಗಕ್ಕೆ ಕೈಜೋಡಿಸಲು ಸಿದ್ಧರಾಗಿದ್ದೇವೆ. ಇಲ್ಲಿ ಹೆಚ್ಚಿನ ಅವಕಾಶಗಳಿದ್ದು, ಹೂಡಿಕೆ ಮಾಡುವಂತೆ ಮೋದಿ ಆಹ್ವಾನ ನೀಡಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.