ADVERTISEMENT

₹1 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವ: ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ

ಪಿಟಿಐ
Published 28 ಸೆಪ್ಟೆಂಬರ್ 2025, 16:02 IST
Last Updated 28 ಸೆಪ್ಟೆಂಬರ್ 2025, 16:02 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಸೆಪ್ಟೆಂಬರ್‌ 25ರಿಂದ 28ರವರೆಗೆ ನಡೆದ ‘ವಿಶ್ವ ಆಹಾರ ಭಾರತ’ ಶೃಂಗಸಭೆಯಲ್ಲಿ ₹1.02 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾವ ಬಂದಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ ಭಾನುವಾರ ತಿಳಿಸಿದೆ. 

ನವದೆಹಲಿಯ ‘ಭಾರತ ಮಂಟಪ’ದಲ್ಲಿ ನಡೆದ ಈ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಪ್ರಮುಖ 26 ಕಂಪನಿಗಳು ₹1.02 ಲಕ್ಷ ಕೋಟಿ ಮೊತ್ತವನ್ನು ದೇಶದ ಆಹಾರ ಸಂಸ್ಕರಣಾ ವಲಯದಲ್ಲಿ ಹೂಡಿಕೆ ಮಾಡಲು ಮುಂದಾಗಿವೆ. ಈ ಕುರಿತು ಕಂಪನಿಗಳೊಂದಿಗೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ ಎಂದು ತಿಳಿಸಿದೆ. 

ಇದು ದೇಶದ ಆಹಾರ ಸಂಸ್ಕರಣಾ ವಲಯದಲ್ಲಿನ ಅತಿದೊಡ್ಡ ಹೂಡಿಕೆಯಾಗಿದೆ. ಈ ಒಪ್ಪಂದಿಂದ 64 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗ ಮತ್ತು ಪರೋಕ್ಷವಾಗಿ 10 ಲಕ್ಷಕ್ಕೂ ಅಧಿಕ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿದೆ ಎಂದು ಅಂದಾಜಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.