ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಸತತ ಎರಡನೇ ವಾರದಲ್ಲಿಯೂ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದೆ.
ಜುಲೈ 5ಕ್ಕೆ ಕೊನೆಗೊಂಡ ವಾರದಲ್ಲಿ ₹15,387 ಕೋಟಿ ಹೆಚ್ಚಾಗಿ, ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 29.66 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆಎಂದು ಆರ್ಬಿಐ ಮಾಹಿತಿ ನೀಡಿದೆ.
ಜೂನ್ 28ಕ್ಕೆ ಕೊನೆಗೊಂಡ ವಾರದಲ್ಲಿ₹ 29.50 ಲಕ್ಷ ಕೋಟಿಗಳಿಗೆ ತಲುಪಿತ್ತು.
ಮೀಸಲು ಸಂಗ್ರಹದಲ್ಲಿ ಅತಿ ಹೆಚ್ಚಿನ ಪಾಲು ಹೊಂದಿರುವವಿದೇಶಿ ಕರೆನ್ಸಿಗಳ ಸಂಗ್ರಹ ₹6,258 ಕೋಟಿ ಹೆಚ್ಚಾಗಿ ₹ 27.66 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.
ಚಿನ್ನದ ಮೀಸಲು ಸಂಗ್ರಹ ₹9,246 ಕೋಟಿ ಹೆಚ್ಚಾಗಿ₹ 1.68 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.
ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಕರೆನ್ಸಿ ಸಂಗ್ರಹ ₹ 105 ಕೋಟಿಗಳಷ್ಟು ಇಳಿದಿದ್ದು,₹ 23,046 ಕೋಟಿಗಳಿಗೆ ಇಳಿಕೆ ಕಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.