ಮುಂಬೈ (ಪಿಟಿಐ): ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ನವೆಂಬರ್ 15ಕ್ಕೆ ಕೊನೆಗೊಂಡ ವಾರದಲ್ಲಿ ₹ 317 ಕೋಟಿ ಹೆಚ್ಚಾಗಿ₹ 32.25 ಲಕ್ಷ ಕೋಟಿಗೆ ತಲುಪಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.
ವಿದೇಶಿ ವಿನಿಮಯ ಮೀಸಲು ಸಂಗ್ರಹಕ್ಕೆ ಅತಿ ಹೆಚ್ಚಿನ ಕೊಡುಗೆ ನೀಡುವ ವಿದೇಶಿ ಕರೆನ್ಸಿಗಳ ಸಂಗ್ರಹ
₹ 12,312 ಕೋಟಿ ಹೆಚ್ಚಾಗಿ ₹ 32.24 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಇದರಿಂದ ಒಟ್ಟಾರೆ ಮೀಸಲು ಸಂಗ್ರಹದಲ್ಲಿಯೂ ಏರಿಕೆ ಕಂಡುಬಂದಿದೆ.ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಕರೆನ್ಸಿ ಸಂಗ್ರಹ ₹ 21 ಕೋಟಿ ಹೆಚ್ಚಾಗಿ ₹ 26,136 ಕೋಟಿಗೆ ಏರಿಕೆ ಕಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.