ADVERTISEMENT

ವಿದೇಶಿ ವಿನಿಮಯ ಸಂಗ್ರಹ ಇಳಿಕೆ: ಆರ್‌ಬಿಐ

​ಪ್ರಜಾವಾಣಿ ವಾರ್ತೆ
Published 3 ಜನವರಿ 2025, 14:09 IST
Last Updated 3 ಜನವರಿ 2025, 14:09 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಡಿಸೆಂಬರ್‌ 27ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹35,273 ಕೋಟಿ ಇಳಿಕೆಯಾಗಿದೆ.

2024ರ ಸೆಪ್ಟೆಂಬರ್‌ನಲ್ಲಿ ಮೀಸಲು ಸಂಗ್ರಹ ಪ್ರಮಾಣವು ₹60.47 ಲಕ್ಷ ಕೋಟಿಗೆ ತಲುಪಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿತ್ತು. ಸದ್ಯ ಒಟ್ಟು ಮೀಸಲು ಸಂಗ್ರಹ ₹54.93 ಲಕ್ಷ ಕೋಟಿಗೆ ಇಳಿದಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ತಿಳಿಸಿದೆ. 

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯದ ಕುಸಿತ ಮುಂದುವರಿದಿದೆ. ಇದರ ತಡೆಗೆ ಆರ್‌ಬಿಐ ವಿದೇಶಿ ವಿನಿಮಯ ಮೀಸಲು ಸಂಗ್ರಹವನ್ನು ಬಳಸಿಕೊಳ್ಳುತ್ತಿದೆ. ಇದರಿಂದ ಮೀಸಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ADVERTISEMENT

ವಿದೇಶಿ ಕರೆನ್ಸಿ ಸಂಗ್ರಹ ಮೌಲ್ಯವು ₹39,820 ಕೋಟಿ ಕಡಿಮೆಯಾಗಿದೆ. ಒಟ್ಟು ಸಂಗ್ರಹ ಪ್ರಮಾಣ ₹47.35 ಲಕ್ಷ ಕೋಟಿ ಆಗಿದೆ. ಚಿನ್ನದ ಮೀಸಲು ಸಂಗ್ರಹವು ₹4,641 ಕೋಟಿ ಹೆಚ್ಚಳವಾಗಿದೆ. ಸ್ಪೆಷಲ್‌ ಡ್ರಾಯಿಂಗ್‌ ರೈಟ್ಸ್‌ (ಎಸ್‌ಡಿಆರ್‌) ಮೀಸಲು ₹102 ಕೋಟಿ ಕಡಿಮೆಯಾಗಿದೆ. 

ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (ಐಎಂಎಫ್‌) ಭಾರತದ ಮೀಸಲು ಸಂಗ್ರಹವು ₹36,181 ಕೋಟಿ ಆಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.