ADVERTISEMENT

ವಿದೇಶಿ ಬಂಡವಾಳ ಒಳಹರಿವು

ಪಿಟಿಐ
Published 5 ಡಿಸೆಂಬರ್ 2018, 18:54 IST
Last Updated 5 ಡಿಸೆಂಬರ್ 2018, 18:54 IST

ನವದೆಹಲಿ: ವಿದೇಶಿ ಸಾಂಸ್ಥಿಕ ಹೂಡಿಕೆದಾರರುದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಮತ್ತೆ ಖರೀದಿ ವಹಿವಾಟು ಆರಂಭಿಸಿದ್ದಾರೆ.

‘ಷೇರುಗಳು ಮತ್ತು ಸಾಲಪತ್ರಗಳ ಮೇಲೆ ನವೆಂಬರ್‌ನಲ್ಲಿ ₹ 10,925 ಕೋಟಿ ಹೂಡಿಕೆ ಮಾಡಿದ್ದಾರೆ. ಹಣಕಾಸು ವರ್ಷದಲ್ಲಿಯೇ ಇದು ಅತ್ಯಂತ ಗರಿಷ್ಠ ಮೊತ್ತವಾಗಿದೆ’ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್‌ ಚಂದ್ರ ಗರ್ಗ್‌ ಮಾಹಿತಿ ನೀಡಿದ್ದಾರೆ.

ಮುಂಬರುವ ತಿಂಗಳುಗಳಲ್ಲಿ ಹೂಡಿಕೆ ಇನ್ನಷ್ಟು ಹೆಚ್ಚಾಗುವ ವಿಶ್ವಾಸವಿದೆ ಎಂದೂ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.