ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆಯನ್ನು ಮುಂದುವರಿಸಿದ್ದಾರೆ.
ಮೇ ತಿಂಗಳಿನಲ್ಲಿ ಇಲ್ಲಿಯವರೆಗೆ ₹14,167 ಕೋಟಿ ಹೂಡಿಕೆ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಹೊರತಾಗಿಯೂ ಈಕ್ವಿಟಿ ಮಾರುಕಟ್ಟೆಯಲ್ಲಿ ಬಂಡವಾಳದ ಒಳಹರಿವು ಪ್ರಮಾಣ ಹೆಚ್ಚಳವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಏಪ್ರಿಲ್‌ನಲ್ಲಿ ₹4,223 ಕೋಟಿ ಹೂಡಿಕೆಯಾಗಿತ್ತು.
ಡಾಲರ್ ಮೌಲ್ಯ ಕಡಿಮೆಯಾಗುತ್ತಿದೆ. ಅಮೆರಿಕ ಮತ್ತು ಚೀನಾದ ಆರ್ಥಿಕತೆ ಬೆಳವಣಿಗೆಯು ಮಂದಗತಿಯಲ್ಲಿದೆ. ಮತ್ತೊಂದೆಡೆ ಭಾರತದಲ್ಲಿ ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದೆ. ಆರ್ಥಿಕತೆ ಬೆಳವಣಿಗೆಯು ಸದೃಢವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಕಡಿತಗೊಳಿಸಿದೆ. ಹಾಗಾಗಿ, ವಿದೇಶಿ ಬಂಡವಾಳದ ಹೂಡಿಕೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.