ADVERTISEMENT

₹45,841 ಕೋಟಿ ವಿದೇಶಿ ಬಂಡವಾಳ ಹಿಂತೆಗೆತ

ಪಿಟಿಐ
Published 26 ಜೂನ್ 2022, 12:53 IST
Last Updated 26 ಜೂನ್ 2022, 12:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಷೇರುಪೇಟೆಯಿಂದ ಜೂನ್‌ನಲ್ಲಿ ಈವರೆಗೆ ₹ 45,841 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ಅಮೆರಿಕ ಮತ್ತು ಭಾರತದ ಕೇಂದ್ರೀಯ ಬ್ಯಾಂಕ್‌ಗಳು ಹಣಕಾಸು ನೀತಿ ಬಿಗಿಗೊಳಿಸಿರುವುದು, ತೈಲ ದರ ಗರಿಷ್ಠ ಮಟ್ಟದಲ್ಲಿ ಇರುವುದು ಹಾಗೂ ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ಬಂಡವಾಳ ಹಿಂದಕ್ಕೆ ಪಡೆಯುತ್ತಿದ್ದಾರೆ. 2022ರಲ್ಲಿ ಈವರೆಗೆ ಒಟ್ಟಾರೆ ₹2.13 ಲಕ್ಷ ಕೋಟಿ ಬಂಡವಾಳ ಹೊರಹರಿವು ಆಗಿದೆ.

‘ಅಮೆರಿಕದ ಡಾಲರ್ ಮೌಲ್ಯ ವೃದ್ಧಿ ಮತ್ತು ಬಾಂಡ್‌ ಗಳಿಕೆಯು ಇದೇ ರೀತಿ ಮುಂದುವರಿದಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿಬಂಡವಾಳ ಹೊರಹರಿವು ಕಂಡುಬರಲಿದೆ’ ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.