ADVERTISEMENT

ಈಕ್ವಿಟಿ ಮಾರುಕಟ್ಟೆ: ಎಫ್‌ಪಿಐ ಹೊರಹರಿವು ಅಬಾಧಿತ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 12:31 IST
Last Updated 26 ಜನವರಿ 2025, 12:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ಜನವರಿ ಆರಂಭದಿಂದ 24ರ ವರೆಗೆ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಒಟ್ಟು ₹64,156 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆಯಾಗಿದೆ. ಅಮೆರಿಕದ ಬಾಂಡ್‌ ಗಳಿಕೆ ಏರಿಕೆ ಕಂಡಿದೆ. ಜೊತೆಗೆ, ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಗಳ ನಿವ್ವಳ ಲಾಭದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ. ಇದರಿಂದ ಹೂಡಿಕೆದಾರರು ಬಂಡವಾಳ ಹಿಂ‍ಪಡೆಯುತ್ತಿದ್ದಾರೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. 

ಜನವರಿ 2ರಂದು ಹೊರತುಪಡಿಸಿದರೆ ಷೇರುಪೇಟೆಯ ಉಳಿದ ಎಲ್ಲಾ ದಿನಗಳ ವಹಿವಾಟಿನಲ್ಲಿ ವಿದೇಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಿದ್ದಾರೆ.

ADVERTISEMENT

‌‘ರೂಪಾಯಿ ಮೌಲ್ಯದ ಇಳಿಕೆಯು ಮುಂದುವರಿದಿರುವುದು ವಿದೇಶಿ ಹೂಡಿಕೆದಾರರ ಮೇಲೆ ಒತ್ತಡ ಸೃಷ್ಟಿಸಿದೆ. ಇದರಿಂದ ಬಂಡವಾಳ ವಾಪಸ್ ಪಡೆಯುತ್ತಿದ್ದಾರೆ’ ಎಂದು ಮಾರ್ನಿಂಗ್‌ಸ್ಟಾರ್‌ ಇನ್ವೆಸ್ಟ್‌ಮೆಂಟ್‌ ರಿಸರ್ಚ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.