ನವದೆಹಲಿ: ಫೆಬ್ರುವರಿ ಮೊದಲ ವಾರದಲ್ಲಿ ದೇಶದ ಈಕ್ವಿಟಿ ಮಾರುಕಟ್ಟೆಯಿಂದ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಒಟ್ಟು ₹7,342 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ಜನವರಿಯಲ್ಲಿ ಒಟ್ಟು ₹78,027 ಕೋಟಿ ಮೌಲ್ಯದ ವಿದೇಶಿ ಬಂಡವಾಳ ಹಿಂಪಡೆಯಲಾಗಿತ್ತು.
‘ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನಡಾ, ಮೆಕ್ಸಿಕೊ ಮತ್ತು ಚೀನಾ ಮೇಲೆ ಸುಂಕ ಹೇರಿದ್ದಾರೆ. ಈ ನೀತಿಯಿಂದ ಜಾಗತಿಕ ವ್ಯಾಪಾರ ವಹಿವಾಟಿಗೆ ತೊಡಕಾಗುವ ಸಾಧ್ಯತೆಯಿದೆ. ಹಾಗಾಗಿ, ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಇದರಿಂದ ದೇಶೀಯ ಷೇರುಪೇಟೆಯಿಂದ ಬಂಡವಾಳ ಹೊರಹರಿವು ಮುಂದುವರಿದಿದೆ’ ಎಂದು ಮಾರ್ನಿಂಗ್‌ಸ್ಟಾರ್ ಇನ್ವೆಸ್ಟ್‌ಮೆಂಟ್ ರಿಸರ್ಚ್ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.