ADVERTISEMENT

ಎಫ್‌ಪಿಐ ಹೂಡಿಕೆ ₹60,358 ಕೋಟಿ

ಪಿಟಿಐ
Published 29 ನವೆಂಬರ್ 2020, 14:30 IST
Last Updated 29 ನವೆಂಬರ್ 2020, 14:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಸತತ ಎರಡನೇ ತಿಂಗಳಿನಲ್ಲಿಯೂ ಭಾರತದ ಮಾರುಕಟ್ಟೆಗಳಲ್ಲಿ ಬಂಡವಾಳ ಹೂಡಿಕೆಗೆ ಗಮನ ನೀಡಿದ್ದಾರೆ.

ನವೆಂಬರ್‌ 3ರಿಂದ 27ರವರೆಗಿನ ಅವಧಿಯಲ್ಲಿ ₹62,951 ಕೋಟಿ ಹೂಡಿಕೆ ಮಾಡಿದ್ದಾರೆ. ಇದರಲ್ಲಿ ₹ 60,358 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹2,593 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ.

ನ್ಯಾಷನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಟೆಡ್‌ (ಎನ್‌ಎಸ್‌ಡಿಎಲ್‌) ಸಂಸ್ಥೆಯು ಎಫ್‌ಪಿಐ ಮಾಹಿತಿಯನ್ನು ಸಂಗ್ರಹಿಸಲು ಆರಂಭಿಸಿದ ಬಳಿಕ ಷೇರುಪೇಟೆಗಳಲ್ಲಿ ಆಗಿರುವ ಗರಿಷ್ಠ ಮೊತ್ತದ ಹೂಡಿಕೆ ಇದಾಗಿದೆ.

ADVERTISEMENT

ವಿದೇಶಿ ಬಂಡವಾಳ ಹೂಡಿಕೆದಾರರು ಅಕ್ಟೋಬರ್‌ನಲ್ಲಿ ₹22,033 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದರು.

‘ಅಭಿವೃದ್ಧಿ ಹೊಂದಿರುವ ಮಾರುಕಟ್ಟೆಗಳಿಗಿಂತಲೂ ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಅತಿ ಹೆಚ್ಚು ಹೂಡಿಕೆ ಮಾಡಲು ಜಾಗತಿಕ ಹೂಡಿಕೆದಾರರು ಆಸಕ್ತಿ ತೋರಿಸುತ್ತಿದ್ದಾರೆ. ದಕ್ಷಿಣ ಕೊರಿಯಾ ಮತ್ತು ತೈವಾನ್‌ ಮಾರುಕಟ್ಟೆಗಳಲ್ಲಿಯೂ ಇದೇ ಪ್ರಮಾಣದಲ್ಲಿ ಹೂಡಿಕೆ ಆಗುತ್ತಿದೆ’ ಎಂದು ಗ್ರೋವ್‌ ಸಂಸ್ಥೆಯ ಸಹ ಸ್ಥಾಪಕ ಹರ್ಷ್‌ ಜೈನ್‌ ಹೇಳಿದ್ದಾರೆ.

‘ಹೂಡಿಕೆದಾರರು ಆರ್ಥಿಕವಾಗಿ ಉತ್ತಮವಾಗಿರುವ ಕಂಪನಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಮುಖ್ಯವಾಗಿ ಬ್ಯಾಂಕಿಂಗ್‌ ವಲಯದಲ್ಲಿ ಹೆಚ್ಚಿನ ಹೂಡಿಕೆ ಆಗುತ್ತಿದೆ’ ಎಂದು ಜೈನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.