ADVERTISEMENT

ಎಫ್‌ಪಿಐ ಹೂಡಿಕೆ ₹ 1,086 ಕೋಟಿ

ಪಿಟಿಐ
Published 11 ಅಕ್ಟೋಬರ್ 2020, 11:15 IST
Last Updated 11 ಅಕ್ಟೋಬರ್ 2020, 11:15 IST

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಅಕ್ಟೋಬರ್‌ 1ರಿಂದ 9ರವರೆಗಿನ ಅವಧಿಯಲ್ಲಿ ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ₹ 1,086 ಕೋಟಿ ಹೂಡಿಕೆ ಮಾಡಿದ್ದಾರೆ.

ಜಿಎಸ್‌ಟಿ ಸಂಗ್ರಹದಲ್ಲಿ ಹೆಚ್ಚಳ, ಆರ್ಥಿಕ ಚಟುವಟಿಕೆಗಳ ಚೇತರಿಕೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿನ ಸಕಾರಾತ್ಮಕ ವಹಿವಾಟಿನ ಕಾರಣಗಳಿಂದಾಗಿ ಹೂಡಿಕೆ ಮಾಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಹೂಡಿಕೆದಾರರು ₹ 5,245 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರೆ ₹ 4,159 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ. ಇದರಿಂದ ಒಟ್ಟಾರೆ ಒಳಹರಿವು ₹ 1,086 ಕೋಟಿಗಳಷ್ಟಾಗಿದೆ.

ADVERTISEMENT

ಸೆಪ್ಟೆಂಬರ್‌ನಲ್ಲಿ ₹ 3,219 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು.

‘ದೇಶಿ ಮತ್ತು ವಿದೇಶಿ ವಿದ್ಯಮಾನಗಳು ಬಂಡವಾಳ ಒಳಹರಿವಿಗೆ ಕಾರಣವಾಗಿವೆ’ ಎಂದು ಗ್ರೋ ಸಂಸ್ಥೆಯ ಸಹ ಸ್ಥಾಪಕ ಹರ್ಷ ಜೈನ್‌ ಹೇಳಿದ್ದಾರೆ.

‘ಎರಡನೇ ತ್ರೈಮಾಸಿಕದ ಫಲಿತಾಂಶವು ನಿರೀಕ್ಷಿಗಿಂತಲೂ ಉತ್ತಮವಾಗಿದೆ. ಜಿಎಸ್‌ಟಿ ಸಂಗ್ರಹ ಹೆಚ್ಚಳ ಮತ್ತು ಆರ್ಥಿಕತೆ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿವೆ. ಇವುಗಳ ಜತೆಗೆ ಜಾಗತಿಕ ಷೇರುಪೇಟೆಗಳು ಕೋವಿಡ್‌ ಮುಂಚಿನ ಮಟ್ಟಕ್ಕೆ ಮರಳುತ್ತಿವೆ. ಈ ಕಾರಣಗಳಿಂದಾಗಿ ಭಾರತವು ವಿದೇಶಿ ಹೂಡಿಕೆಯನ್ನು ಆಕರ್ಷಿಸುತ್ತಿದೆ’ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.