ADVERTISEMENT

ಎಫ್‌ಪಿಐ: ₹18,620 ಕೋಟಿ ಹೂಡಿಕೆ

ಪಿಟಿಐ
Published 18 ಮೇ 2025, 14:00 IST
Last Updated 18 ಮೇ 2025, 14:00 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಚಿಲ್ಲರೆ ಹಣದುಬ್ಬರದ ಇಳಿಕೆ ಮತ್ತು ಆರ್ಥಿಕತೆಯು ವೇಗ ಪಡೆದಿರುವುದರಿಂದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವಿನ ಪ್ರಮಾಣ ಹೆಚ್ಚಿದೆ. 

ಮೇ ತಿಂಗಳಿನಲ್ಲಿ ಇಲ್ಲಿಯವರೆಗೆ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ₹18,620 ಕೋಟಿ ಹೂಡಿಕೆ ಮಾಡಿದ್ದಾರೆ. 

ವಿದೇಶಿ ಹೂಡಿಕೆದಾರರಿಂದ ಷೇರುಗಳ ಖರೀದಿ ಮುಂದುವರಿಯುವ ನಿರೀಕ್ಷೆಯಿದೆ. ಇದು ಲಾರ್ಜ್‌ಕ್ಯಾಪ್‌ ಸೂಚ್ಯಂಕವು ಚೇತರಿಕೆ ಕಾಣಲು ನೆರವಾಗಲಿದೆ ಎಂದು ಜಿಯೊಜಿತ್‌ ಇನ್ವೆಸ್ಟ್‌ಮೆಂಟ್ಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯ್‌ಕುಮಾರ್‌  ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.