ನವದೆಹಲಿ: ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ಡಿಸೆಂಬರ್‌ನ ಮೊದಲ ಎರಡು ವಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ₹22,766 ಕೋಟಿ ಹೂಡಿಕೆ ಮಾಡಿದ್ದಾರೆ.
ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ಭರವಸೆಯು ಹೂಡಿಕೆದಾರರಲ್ಲಿ ಮೂಡಿದೆ. ಹಾಗಾಗಿ, ದೇಶದ ಮಾರುಕಟ್ಟೆಯಲ್ಲಿ ಬಂಡವಾಳದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಸೆಪ್ಟೆಂಬರ್‌ನಲ್ಲಿ ₹57,724 ಕೋಟಿ ಹೂಡಿಕೆಯಾಗಿದ್ದು, ದಾಖಲೆಯಾಗಿತ್ತು. ಅಕ್ಟೋಬರ್‌ನಲ್ಲಿ ₹94,017 ಕೋಟಿ ಹಾಗೂ ನವೆಂಬರ್‌ನಲ್ಲಿ ₹21,612 ಕೋಟಿ ಬಂಡವಾಳ ಹಿಂಪಡೆಯಲಾಗಿತ್ತು.
‘ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದ ಹಿಂದೆ ಹಲವು ಕಾರಣಗಳು ಬೆಸೆದುಕೊಂಡಿವೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಣದುಬ್ಬರ ನಿಯಂತ್ರಣ ಹಾಗೂ ಬಡ್ಡಿದರ ಕಡಿತ ಸಂಬಂಧ ಹಲವು ಕ್ರಮಕೈಗೊಳ್ಳುವ ನಿರೀಕ್ಷೆಯಿದೆ. ಇದು ಒಳಹರಿವು ಹೆಚ್ಚಳಕ್ಕೆ ನೆರವಾಗಿದೆ’ ಎಂದು ಮಾರ್ನಿಂಗ್‌ಸ್ಟಾರ್ ಇನ್ವೆಟ್‌ಮೆಂಟ್ ರಿಸರ್ಚ್ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.