ADVERTISEMENT

ಎಫ್‌ಪಿಐ: ₹ 2,038 ಕೋಟಿ ಹೊರಹರಿವು

ಪಿಟಿಐ
Published 13 ಸೆಪ್ಟೆಂಬರ್ 2020, 15:50 IST
Last Updated 13 ಸೆಪ್ಟೆಂಬರ್ 2020, 15:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಸೆಪ್ಟೆಂಬರ್‌ 1ರಿಂದ 11ರವರೆಗಿನ ವಹಿವಾಟಿನಲ್ಲಿ ಬಂಡವಾಳ ಮಾರುಕಟ್ಟೆಯಿಂದ ₹ 2,038 ಕೋಟಿ ಹಿಂದಕ್ಕೆ ಪಡೆದಿದ್ದಾರೆ.

ಹೂಡಿಕೆದಾರರು, ಷೇರುಪೇಟೆಯಿಂದ ₹ 3,510 ಕೊಟಿ ಹಿಂದಕ್ಕೆ ಪಡೆದಿದ್ದಾರೆ. ಸಾಲಪತ್ರಗಳ ಮಾರುಕಟ್ಟೆಯಲ್ಲಿ ₹ 1,472 ಕೋಟಿ ಹೂಡಿಕೆ ಮಾಡಿದ್ದಾರೆ.

ಜೂನ್‌ನಲ್ಲಿ ₹ 24,053 ಕೋಟಿ, ಜುಲೈನಲ್ಲಿ ₹ 3,301 ಕೋಟಿ ಹಾಗೂ ಆಗಸ್ಟ್‌ನಲ್ಲಿ ₹ 46,532 ಕೋಟಿ ಹೂಡಿಕೆ ಮಾಡಿದ್ದರು.

ADVERTISEMENT

‘ಸೆಪ್ಟೆಂಬರ್‌ ತಿಂಗಳ ಆರಂಭದಿಂದಲೂ ವಿದೇಶಿ ಬಂಡವಾಳ ಹೂಡಿಕೆದಾರರು ಭಾರತದ ಷೇರುಪೇಟೆಗಳಲ್ಲಿ ಬಹಳ ಎಚ್ಚರಿಕೆಯಿಂದ ಹೂಡಿಕೆ ಮಾಡುತ್ತಿದ್ದಾರೆ’ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

‘ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿತವು ಹೂಡಿಕೆ ಚಟುವಟಿಕೆಯ ಮೇಲೆ ಪರಿಣಾಮ ಉಂಟುಮಾಡಿದೆ. ಭಾರತ–ಚೀನಾ ಗಡಿ ಬಿಕ್ಕಟ್ಟು ಹಾಗೂ ಜಾಗತಿಕ ಮಾರುಕಟ್ಟೆಯನ್ನು ಗಮನದಲ್ಲಿ ಇಟ್ಟುಕೊಂಡು ಹೂಡಿಕೆದಾರರು ಖರೀದಿಯಿಂದ ಹಿಂದೆ ಸರಿದಿದ್ದಾರೆ. ಷೇರುಪೇಟೆಗಳ ಸಕಾರಾತ್ಮಕ ವಹಿವಾಟಿನ ಲಾಭ ಪಡೆಯುವ ಉದ್ದೇಶದಿಂದಲೂ ಬಂಡವಾಳ ಹೊರಹರಿವು ಆಗಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.