ಬೆಂಗಳೂರು: ಜೆಮಿನಿ ಎಡಿಬಲ್ಸ್ ಆ್ಯಂಡ್ ಫ್ಯಾಟ್ಸ್ ಇಂಡಿಯಾ ಲಿಮಿಟೆಡ್ (ಜಿಇಎಫ್ ಇಂಡಿಯಾ) ಕಂಪನಿಯ ಬ್ರ್ಯಾಂಡ್ ಆಗಿರುವ ‘ಫ್ರೀಡಂ ಹೆಲ್ದಿ ಕುಕಿಂಗ್ ಆಯಿಲ್ಸ್’ಗೆ ‘ಎಐಎಂಎ- ಆರ್.ಕೆ. ಸ್ವಾಮಿ ಅತ್ಯುತ್ತಮ ಬ್ರ್ಯಾಂಡ್ ಪ್ರಶಸ್ತಿ 2021’ ದೊರೆತಿದೆ.
ಎಐಎಂಎ ಸಂಸ್ಥೆಯ 49ನೇ ರಾಷ್ಟ್ರೀಯ ಆಡಳಿತ ನಿರ್ವಹಣೆ ಸಮಾವೇಶದಲ್ಲಿ ಈ ಪ್ರಶಸ್ತಿ ವಿತರಿಸಲಾಯಿತು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ‘ಫ್ರೀಡಂ ಹೆಲ್ದಿ ಕುಕಿಂಗ್ ಆಯಿಲ್ಸ್’ನ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಹಿರಿಯ ಉಪಾಧ್ಯಕ್ಷ ಪಿ. ಚಂದ್ರಶೇಖರ ರೆಡ್ಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.
ಪ್ರಶಸ್ತಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಮಿನಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಚೌಧರಿ, ‘ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ನಮ್ಮ ಸಿಬ್ಬಂದಿಯ ಕಠಿಣ ಪರಿಶ್ರಮ ಮತ್ತು ಕಳೆದ ಹಲವು ವರ್ಷಗಳಿಂದ ನಮ್ಮೊಂದಿಗೆ ಕೆಲಸ ಮಾಡುತ್ತಿರುವ ವಿತರಕರು ಹಾಗೂ ಏಜೆನ್ಸಿ ಪಾಲುದಾರರ ಶ್ರಮದಿಂದಾಗಿ ಇದನ್ನು ಗೆಲ್ಲಲು ಸಾಧ್ಯವಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.