ADVERTISEMENT

ಕಚ್ಚಾ ತೈಲ ದರ ಹೆಚ್ಚಳ: ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಏರಿಕೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 5:48 IST
Last Updated 9 ಫೆಬ್ರುವರಿ 2021, 5:48 IST
ಸಾಂದರ್ಭಿಕ ಚಿತ್ರ (ಕೃಪೆ: ರಾಯಿಟರ್ಸ್)
ಸಾಂದರ್ಭಿಕ ಚಿತ್ರ (ಕೃಪೆ: ರಾಯಿಟರ್ಸ್)   

ನವದೆಹಲಿ: ಇಂಧನ ಬೆಲೆ ಮಂಗಳವಾರ ದಾಖಲೆ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 35 ಪೈಸೆಯಷ್ಟು ಹೆಚ್ಚಳವಾಗಿದೆ.

ದೆಹಲಿಯಲ್ಲೀಗ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹87.30 ಆಗಿದೆ. ಮುಂಬೈಯಲ್ಲಿ ₹93.83 ಆಗಿದೆ. ಪ್ರತಿ ಲೀಟರ್ ಡೀಸೆಲ್ ದರ ದೆಹಲಿಯಲ್ಲಿ ₹77.48 ಆಗಿದ್ದು, ಮುಂಬೈಯಲ್ಲಿ ₹84.36 ಆಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹89.83 ಹಾಗೂ ಡೀಸೆಲ್ ಬೆಲೆ ₹82.79 ಆಗಿದೆ.

ಬ್ರೆಂಟ್ ಕಚ್ಚಾ ತೈಲ ಬೆಲೆ ಸೋಮವಾರ ಪ್ರತಿ ಬ್ಯಾರಲ್‌‌ಗೆ 60 ಡಾಲರ್ ತಲುಪಿದೆ. ಇದು ಈ ವರ್ಷದ ಗರಿಷ್ಠವಾಗಿದೆ. ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಯು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮೇಲೆ ಪರಿಣಾಮ ಬೀರುತ್ತಿದೆ.

ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿರುವುದು ಇತರ ಸರಕುಗಳ ಬೆಲೆ ಏರಿಕೆಗೂ ಕಾರಣವಾಗಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.