ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ

ಪಿಟಿಐ
Published 8 ಜುಲೈ 2021, 16:07 IST
Last Updated 8 ಜುಲೈ 2021, 16:07 IST
   

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗುರುವಾರ ಇಂಧನ ದರ ಹೆಚ್ಚಿಸಿವೆ. ಪೆಟ್ರೋಲ್‌ ದರ ಲೀಟರಿಗೆ 35 ಪೈಸೆ ಮತ್ತು ಡೀಸೆಲ್‌ ದರ 9 ಪೈಸೆ ಏರಿಕೆ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 106.59 ಮತ್ತು ಡೀಸೆಲ್‌ ದರ ₹ 97.18ಕ್ಕೆ ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 100.56 ಮತ್ತು ಡೀಸೆಲ್‌ ₹ 89.62ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರಿಗೆ ₹ 103.99 ಮತ್ತು ಡೀಸೆಲ್‌ ದರ ಲೀಟರಿಗೆ ₹ 95.05ಕ್ಕೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT