ADVERTISEMENT

ಮಹಾರಾಷ್ಟ್ರ: ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜುಲೈ 2022, 8:31 IST
Last Updated 14 ಜುಲೈ 2022, 8:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ ₹5 ಮತ್ತು ಡೀಸೆಲ್‌ಗೆ ₹3 ಇಳಿಕೆಯಾಗಿದೆ.

ಈ ಕುರಿತು ಗುರುವಾರ ನಡೆದ ಮಹಾರಾಷ್ಟ್ರ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ತೆರಿಗೆ ಕಡಿತದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ₹6000 ಕೋಟಿ ಹೆಚ್ಚಿನ ಹೊರೆ ಬೀಳಲಿದೆ.

ADVERTISEMENT

ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ನೂತನ ಸರಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.