ADVERTISEMENT

‘ಆದ್ಯತಾ ವಲಯ ವ್ಯಾಪ್ತಿಗೆ ಪರ್ಯಾಯ ಇಂಧನ ತಯಾರಿಕಾ ಕಂಪನಿ’: ಗಡ್ಕರಿ

ಪಿಟಿಐ
Published 2 ಮೇ 2022, 16:07 IST
Last Updated 2 ಮೇ 2022, 16:07 IST
   

ನವದೆಹಲಿ: ಬಯೊ ಎಥೆನಾಲ್‌, ಸಿಎನ್‌ಜಿ ಮತ್ತು ಎಲ್‌ಎನ್‌ಜಿ ತಯಾರಿಕೆಯಲ್ಲಿ ತೊಡಗಿರುವ ಕಂಪನಿಗಳನ್ನು ಸಹ ಆದ್ಯತಾ ವಲಯದ ಸಾಲ ಸೌಲಭ್ಯ ವ್ಯಾಪ್ತಿಗೆ ತರಬೇಕಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್ ಜೊತೆ ಮಾತನಾಡುವುದಾಗಿಯೂ ಅವರು ತಿಳಿಸಿದ್ದಾರೆ.

ಆದ್ಯತಾ ವಲಯದ ಸಾಲದ ವ್ಯಾಪ್ತಿಗೆ ತರುವುದರಿಂದ ಕಂಪನಿಗಳಿಗೆ ಬ್ಯಾಂಕ್‌ಗಳಿಂದ ಸುಲಭವಾಗಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಅದರಿಂದ, ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಪ್ರಮಾಣ ತಗ್ಗಿಸಲು ಸಹ ಸಹಾಯ ಆಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.

ADVERTISEMENT

ಫೇಮ್‌–2 ಯೋಜನೆ ಅಡಿಯಲ್ಲಿ 5,400 ವಿದ್ಯುತ್ ಚಾಲಿತ ಬಸ್‌ಗಳ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಆರು ತಿಂಗಳಲ್ಲಿ ಸಂಚಾರ ಆರಂಭ ಆಗಲಿದೆ ಎಂದು ಬೃಹತ್ ಉದ್ದಿಮೆಗಳ ಸಚಿವ ಮಹೇಂದ್ರ ನಾಥ್‌ ಪಾಂಡೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.