
ಪ್ರಜಾವಾಣಿ ವಾರ್ತೆ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.
ಬೆಳ್ಳಿ ದರವು ಕೆ.ಜಿಗೆ ₹15 ಸಾವಿರದಷ್ಟು ಹೆಚ್ಚಳವಾಗಿ, ₹2.65 ಲಕ್ಷದಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹2,900ರಷ್ಟು ಏರಿಕೆಯಾಗಿ, ₹1,44,600ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿದ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತ ಮಾಡುವ ನಿರೀಕ್ಷೆಯು ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.