ADVERTISEMENT

Gold And Silver Price: ಚಿನ್ನದ ದರ ₹1.71 ಲಕ್ಷ, ಬೆಳ್ಳಿ ₹3.85 ಲಕ್ಷ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 15:39 IST
Last Updated 28 ಜನವರಿ 2026, 15:39 IST
ಚಿನ್ನ
ಚಿನ್ನ   

ನವದೆಹಲಿ : ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರದ ವಹಿವಾಟಿನಲ್ಲೂ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಮುಂದುವರಿದಿದ್ದು, ಬೆಲೆ ಇಳಿಕೆಯ ಲಕ್ಷಣಗಳು ಕಾಣಿಸುತ್ತಿಲ್ಲ.

10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹5 ಸಾವಿರ ಹೆಚ್ಚಳವಾಗಿ, ₹1.71 ಲಕ್ಷದಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹15 ಸಾವಿರ ಏರಿಕೆಯಾಗಿ, ₹3.85 ಲಕ್ಷಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ತಮಿಳುನಾಡಿನ ಚೆನ್ನೈನಲ್ಲಿ 1 ಕೆ.ಜಿ ಬೆಳ್ಳಿ ದರವು ₹4 ಲಕ್ಷಕ್ಕೆ ಮುಟ್ಟಿದೆ.

ADVERTISEMENT

ಅಮೆರಿಕದ ಡಾಲರ್ ಮೌಲ್ಯ ಇಳಿಕೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರು ನಿರಂತರವಾಗಿ ಚಿನ್ನ ಮತ್ತು ಬೆಳ್ಳಿ ಖರೀದಿಗೆ ಮುಂದಾಗಿರುವುದು ಬೆಲೆ ಏರಿಕೆಗೆ ಕಾರಣ ಎಂದು ತಿಳಿಸಿದೆ. 

‘ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಮತ್ತು ವ್ಯಾಪಾರ ಸಂಬಂಧಿತ ಅನಿಶ್ಚಿತತೆಯು ಮುಂದುವರಿದಿದೆ. ಇದು ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯಾದ ಚಿನ್ನ ಮತ್ತು ಬೆಳ್ಳಿಯಲ್ಲಿ ಹೂಡಿಕೆ ಮಾಡಲು ಉತ್ತೇಜಿಸಿದೆ. ಇದು ದರ ಏರಿಕೆಗೆ ಕಾರಣ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸರಕುಗಳ ವಿಭಾಗದ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.