
ಪ್ರಜಾವಾಣಿ ವಾರ್ತೆ
ಚಿನ್ನ, ಬೆಳ್ಳಿ ಬೆಲೆ ಏರಿಕೆ (ಪ್ರಾತಿನಿಧಿಕ ಚಿತ್ರ)
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆ ಆಗಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,300 ಹೆಚ್ಚಳವಾಗಿ, ₹1,58,500ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹17 ಸಾವಿರ ಏರಿಕೆಯಾಗಿ, ₹2.72 ಲಕ್ಷಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಅಮೂಲ್ಯ ಲೋಹಗಳ ಖರೀದಿ ಹೆಚ್ಚಳವಾಗಿದೆ. ಅಲ್ಲದೆ, ಡಾಲರ್ ಮೌಲ್ಯ ಇಳಿಕೆ ಆಗಿದೆ. ಇದು ಚಿನ್ನ ಮತ್ತು ಬೆಳ್ಳಿ ದರ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.