
ಪಿಟಿಐ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆ ಆಗಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹600 ಹೆಚ್ಚಳವಾಗಿ, ₹1,61,300ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹4 ಸಾವಿರ ಏರಿಕೆಯಾಗಿ, ₹2,68,500ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
‘ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಹೂಡಿಕೆದಾರರು ಚಿನ್ನ ಮತ್ತು ಬೆಳ್ಳಿ ಖರೀದಿಯತ್ತ ಮುಂದಾಗಿದ್ದರಿಂದ ದರವು ಏರಿಕೆ ಆಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.