ADVERTISEMENT

ಸೋಮವಾರದಿಂದ ಚಿನ್ನದ ಬಾಂಡ್‌ನ ನಾಲ್ಕನೇ ಕಂತು

ಪಿಟಿಐ
Published 10 ಜುಲೈ 2021, 21:43 IST
Last Updated 10 ಜುಲೈ 2021, 21:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಚಿನ್ನದ ಬಾಂಡ್‌ ಯೋಜನೆಯ 2021–22ನೇ ಸಾಲಿನ ನಾಲ್ಕನೇ ಕಂತು ಸೋಮವಾರದಿಂದ ಆರಂಭ ಆಗಲಿದ್ದು, ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನೀಡಿಕೆ ಬೆಲೆಯನ್ನು ಪ್ರತಿ ಗ್ರಾಂಗೆ ₹ 4,807ರಂತೆ ನಿಗದಿಪಡಿಸಿದೆ.

ಬಾಂಡ್‌ ಖರೀದಿಸಲು ಆನ್‌ಲೈನ್‌ ಮೂಲಕ ಹಣ ಪಾವತಿಸುವವರಿಗೆ ಪ್ರತಿ ಗ್ರಾಂಗೆ ₹ 50ರಂತೆ ವಿನಾಯಿತಿ ಸಿಗಲಿದೆ. ಹೀಗಾಗಿ ಇಂತಹ ಹೂಡಿಕೆದಾರರಿಗೆ ನೀಡಿಕೆ ಬೆಲೆ ₹ 4,757 ಇರಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಬಾಂಡ್‌ ಖರೀದಿಸಲು ಅವಕಾಶ ಇರಲಿದೆ.

ಬ್ಯಾಂಕುಗಳು (ಕಿರು ಹಣಕಾಸು ಬ್ಯಾಂಕ್ ಮತ್ತು ಪೇಮೆಂಟ್‌ ಬ್ಯಾಕ್ಸ್‌ ಹೊರತುಪಡಿಸಿ), ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ, ಅಂಚೆ ಕಚೇರಿ, ಬಿಎಸ್‌ಇ ಮತ್ತು ಎನ್‌ಎಸ್ಇ ಮೂಲಕ ಚಿನ್ನದ ಬಾಂಡ್‌ ಮಾರಾಟ ನಡೆಯಲಿದೆ.

ADVERTISEMENT

ಕನಿಷ್ಠ ಹೂಡಿಕೆ 1 ಗ್ರಾಂ ಇರಲಿದೆ ಎಂದು ಸಚಿವಾಲಯವು ತಿಳಿಸಿದೆ. ಪ್ರಕಟಣೆಯ ಪ್ರಕಾರ, ವೈಯಕ್ತಿಕ ಖರೀದಿದಾರರಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಕ್ಕೆ 4 ಕೆ.ಜಿ ಹಾಗೂ ಟ್ರಸ್ಟ್‌ಗಳಿಗೆ 20 ಕೆ.ಜಿಯ ಗರಿಷ್ಠ ಮಿತಿ ನೀಡಲಾಗಿದೆ.

ಮೇ ತಿಂಗಳಿನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ಒಟ್ಟು ಆರು ಕಂತುಗಳಲ್ಲಿ ಚಿನ್ನದ ಬಾಂಡ್ ವಿತರಣೆ ಆಗಲಿದೆ ಎಂದು ಸರ್ಕಾರ ಈಗಾಗಲೇ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.