(ಸಾಂದರ್ಭಿಕ ಚಿತ್ರ)
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆಯಾಗಿದೆ.
10 ಗ್ರಾಂ ಚಿನ್ನಕ್ಕೆ ₹500 ಹೆಚ್ಚಳವಾಗಿದ್ದು, ₹74,100ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1,000 ಏರಿಕೆಯಾಗಿದ್ದು, ₹84,600ಕ್ಕೆ ಮುಟ್ಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್ಗೆ (28.34 ಗ್ರಾಂ) ಕ್ರಮವಾಗಿ 2,546 ಡಾಲರ್ (ಅಂದಾಜು ₹2.13 ಲಕ್ಷ) ಮತ್ತು 29 ಡಾಲರ್ನಂತೆ (ಅಂದಾಜು ₹2,441) ಮಾರಾಟವಾಗಿದೆ.
ಏರಿಕೆಗೆ ಕಾರಣವೇನು?: ಸಾಗರೋತ್ತರ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಕೆಯಾಗಿರುವುದು, ದೇಶೀಯ ಆಭರಣ ತಯಾರಕರು ಮತ್ತು ಮಾರಾಟಗಾರರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಚಿನ್ನದ ಧಾರಣೆಯು ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.