ADVERTISEMENT

ಚಿನ್ನದ ದರ ₹ 51,443

ಪಿಟಿಐ
Published 23 ಜುಲೈ 2020, 15:00 IST
Last Updated 23 ಜುಲೈ 2020, 15:00 IST
ಚಿನ್ನ
ಚಿನ್ನ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವೂ ಚಿನ್ನದ ಧಾರಣೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಗುರುವಾರ 10ಗ್ರಾಂಗೆ ₹ 523ರಂತೆ ಹೆಚ್ಚಳ ಕಂಡು ₹ 51,443ಕ್ಕೆ ತಲುಪಿದೆ. ಬುಧವಾರದ ವಹಿವಾಟಿನ ಅಂತ್ಯದಲ್ಲಿ ಚಿನ್ನದ ಬೆಲೆ ₹ 50,920 ಇತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 1,875 ಡಾಲರ್‌ಗೆ ತಲುಪಿದೆ. ಅಮೆರಿಕ–ಚೀನಾ ಬಿಕ್ಕಟ್ಟು ತೀವ್ರವಾಗುತ್ತಿರುವುದು ಮತ್ತು ಅಮೆರಿಕದಲ್ಲಿ ಕೋವಿಡ್–19‌ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿರುವುದರಿಂದ ಚಿನ್ನದ ದರ ಏರುಮುಖವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT