ADVERTISEMENT

ಚಿನ್ನದ ದರ ₹ 353 ಇಳಿಕೆ

ಪಿಟಿಐ
Published 1 ಜೂನ್ 2022, 14:26 IST
Last Updated 1 ಜೂನ್ 2022, 14:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 353ರಷ್ಟು ಇಳಿಕೆ ಆಗಿ ₹ 50,509ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 123ರಷ್ಟು ಕಡಿಮೆ ಆಗಿ ₹ 60,834ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಹೆಚ್ಚಳ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT