ADVERTISEMENT

Gold Rate Today: ಚಿನ್ನದ ಬೆಲೆ ₹1,500 ಇಳಿಕೆ

ಪಿಟಿಐ
Published 8 ಮೇ 2025, 15:35 IST
Last Updated 8 ಮೇ 2025, 15:35 IST
ಚಿನ್ನದ ಬೆಲೆ ಇಳಿಕೆ
ಚಿನ್ನದ ಬೆಲೆ ಇಳಿಕೆ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ಧಾರಣೆಯು ಇಳಿಕೆಯಾಗಿದೆ.

10 ಗ್ರಾಂ ಚಿನ್ನದ (ಶೇ 99.9 ಪರಿಶುದ್ಧತೆ) ಬೆಲೆಯು ₹1,500 ಇಳಿಕೆಯಾಗಿದ್ದು, ₹99,500 ಆಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ದರವು ₹1,550 ಕಡಿಮೆಯಾಗಿದ್ದು, ₹98,800 ಆಗಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

ಬುಧವಾರದ ವಹಿವಾಟಿನಲ್ಲಿ ಚಿನ್ನದ ಬೆಲೆಯು ಮತ್ತೆ ₹1 ಲಕ್ಷದ ಗಡಿ ದಾಟಿತ್ತು. 

ADVERTISEMENT

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಬ್ರಿಟನ್‌ ಜತೆಗೆ ವ್ಯಾಪಾರ ಒಪ್ಪಂದ ಕುರಿತು ಮಾತುಕತೆ ನಡೆಸುವುದಾಗಿ ಪ್ರಕಟಿಸಿದ್ದಾರೆ. ಇದು ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರತಿ ಕೆ.ಜಿ ಬೆಳ್ಳಿ ಧಾರಣೆಯು ₹740 ಇಳಿಕೆಯಾಗಿದ್ದು, ₹98,200 ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.