ADVERTISEMENT

Gold Rate: ಚಿನ್ನ, ಬೆಳ್ಳಿ ದರ ಇಳಿಕೆ

ಪಿಟಿಐ
Published 23 ಫೆಬ್ರುವರಿ 2023, 10:48 IST
Last Updated 23 ಫೆಬ್ರುವರಿ 2023, 10:48 IST
   

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹305ರಷ್ಟು ಇಳಿಕೆ ಕಂಡು ₹56,035ರಂತೆ ಮಾರಾಟ ಆಯಿತು. ಬೆಳ್ಳಿ ಧಾರಣೆ ಕೆ.ಜಿಗೆ ₹805ರಷ್ಟು ಕಡಿಮೆ ಆಗಿ ₹65,095ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಕಡಿಮೆ ಆಗಿರುವುದರಿಂದ ದೇಶಿ ಮಾರುಕಟ್ಟೆಯ ಮೇಲೆಯೂ ಅದರ ಪ್ರಭಾವ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಹಣದುಬ್ಬರದ ಒತ್ತಡವನ್ನು ಕಡಿಮೆ ಮಾಡಲು ಅಮೆರಿಕದ ಫೆಡರಲ್‌ ರಿಸರ್ವ್‌, ದೀರ್ಘಾವಧಿಯವರೆಗೆ ಬಡ್ಡಿದರವನ್ನು ಗರಿಷ್ಠ ಮಟ್ಟದಲ್ಲಿಯೇ ಉಳಿಸಿಕೊಳ್ಳಲು ಸೂಚನೆ ನೀಡಿದೆ. ಇದರಿಂದಾಗಿ ಚಿನ್ನದ ದರ ಇಳಿಕೆ ಕಂಡಿತು ಎಂದು ಮೋತಿಲಾಲ್‌ ಓಸ್ವಾಲ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಹಿರಿಯ ಉಪಾಧ್ಯಕ್ಷ ನವ್‌ನೀತ್‌ ದಮನಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.