ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಎರಡು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನ, ಬೆಳ್ಳಿ ದರ ಬುಧವಾರ ಇಳಿಕೆ ಕಂಡಿತು.
10 ಗ್ರಾಂ ಚಿನ್ನದ ದರ ₹ 614ರಷ್ಟು ಇಳಿಕೆಯಾಗಿ ₹ 52,314ರಲ್ಲಿ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,799ರಷ್ಟು ಕಡಿಮೆಯಾಗಿ ₹ 71,202ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆಯಾಗಿದೆ, ಅದು ದೇಶಿ ಮಾರುಕಟ್ಟೆಯ ಮೇಲೆಯೂ ಪ್ರತಿಫಲಿಸಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.