ADVERTISEMENT

ಚಿನ್ನ ₹ 199, ಬೆಳ್ಳಿ ₹ 250ರಷ್ಟು ಇಳಿಕೆ

ಪಿಟಿಐ
Published 30 ಆಗಸ್ಟ್ 2021, 16:25 IST
Last Updated 30 ಆಗಸ್ಟ್ 2021, 16:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ₹ 199ರಷ್ಟು ಇಳಿಕೆ ಆಗಿ ₹ 46,389ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 250ರಷ್ಟು ಕಡಿಮೆಯಾಗಿ ₹ 62,063ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಳ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT