ADVERTISEMENT

ಚಿನ್ನ ₹ 478, ಬೆಳ್ಳಿ ₹ 1,265 ಇಳಿಕೆ

ಪಿಟಿಐ
Published 21 ಜುಲೈ 2022, 11:23 IST
Last Updated 21 ಜುಲೈ 2022, 11:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹ 478ರಷ್ಟು ಇಳಿಕೆ ಕಂಡು ₹ 49,830ರಂತೆ ಮಾರಾಟವಾಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,265ರಷ್ಟು ಇಳಿಕೆ ಆಗಿ ₹ 54,351ಕ್ಕೆ ತಲುಪಿತು.

ಡಾಲರ್ ಮೌಲ್ಯ ವೃದ್ಧಿ ಮತ್ತು ಷೇರುಪೇಟೆಗಳ ಗಳಿಕೆಯಿಂದಾಗಿ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.