Gold Silver Prices
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಇಳಿಕೆಯಾಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹490 ಕಡಿಮೆಯಾಗಿ, ₹96,540ರಂತೆ ಮಾರಾಟವಾಗಿದೆ. ಆಭರಣ ಚಿನ್ನದ ದರವು (ಶೇ 99.5 ಪರಿಶುದ್ಧತೆ) ₹450 ಇಳಿಕೆಯಾಗಿದ್ದು, ₹96,130 ಆಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1 ಸಾವಿರ ಇಳಿಕೆಯಾಗಿ, ₹97,500 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಅಮೆರಿಕ ಮತ್ತು ಚೀನಾ ನಡುವಿನ ಸುಂಕ ಸಮರಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಕದನ ವಿರಾಮ ಕುರಿತು ಶೀಘ್ರವೇ ಮಾತುಕತೆ ಶುರುವಾಗುವ ನಿರೀಕ್ಷೆಯಿದೆ. ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್, ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆಯಿದೆ. ಹೀಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹಕ್ಕೆ ಬೇಡಿಕೆ ಕಡಿಮೆಯಾಗಿದ್ದು, ದರ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.