ADVERTISEMENT

ಚಿನ್ನ ₹ 385, ಬೆಳ್ಳಿ ₹ 1,102 ಏರಿಕೆ

ಪಿಟಿಐ
Published 24 ಡಿಸೆಂಬರ್ 2020, 10:54 IST
Last Updated 24 ಡಿಸೆಂಬರ್ 2020, 10:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಎರಡು ದಿನಗಳಿಂದ ಇಳಿಮುಖವಾಗಿದ್ದ ಚಿನ್ನ, ಬೆಳ್ಳಿ ದರ ಗುರುವಾರ ಏರಿಕೆ ಹಾದಿ ಹಿಡಿಯಿತು.

10ಗ್ರಾಂ ಚಿನ್ನದ ದರ ₹ 385ರಷ್ಟು ಏರಿಕೆಯಾಗಿ ₹ 49,624ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,102ರಷ್ಟು ಹೆಚ್ಚಾಗಿ ₹ 66,954ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ADVERTISEMENT

‘ಡಾಲರ್‌ ಮೌಲ್ಯ ಇಳಿಕೆಯಿಂದಾಗಿ ಚಿನ್ನದ ದರ ಹೆಚ್ಚಾಗಿದೆ. ಹೊಸ ಸ್ವರೂಪದ ಕೊರೊನಾ ವೈರಸ್‌ ಕಾಣಿಸಿಕೊಂಡಿರುವುದು ಹಾಗೂ ಅದನ್ನು ನಿಯಂತ್ರಿಸಲು ಲಾಕ್‌ಡೌನ್‌ ಜಾರಿಯಾಗುವ ಆತಂಕವೂ ಚಿನ್ನದ ದರ ಏರಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.