ADVERTISEMENT

ಚಿನ್ನ, ಬೆಳ್ಳಿ ದರ ಏರಿಕೆ

ಪಿಟಿಐ
Published 10 ಮೇ 2021, 14:04 IST
Last Updated 10 ಮೇ 2021, 14:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 179ರಷ್ಟು ಹೆಚ್ಚಾಗಿ ₹ 47,452ರಂತೆ ಮತ್ತು ಬೆಳ್ಳಿ ಧಾರಣೆ ಕೆ.ಜಿಗೆ ₹ 826ರಷ್ಟು ಹೆಚ್ಚಾಗಿ ₹ 71,541ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಡಾಲರ್‌ ಮೌಲ್ಯ ಇಳಿಕೆ ಮತ್ತು ಅಮೆರಿಕದ ಬಾಂಡ್‌ ಗಳಿಕೆ ಕಡಿಮೆ ಆಗಿರುವುದರಿಂದ ಚಿನ್ನದ ದರ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.