ADVERTISEMENT

ಹಣಕಾಸು ವರ್ಷದ ಏಪ್ರಿಲ್‌–ಜುಲೈ ಅವಧಿಯಲ್ಲಿ ಚಿನ್ನದ ಆಮದು ಇಳಿಕೆ

ಪಿಟಿಐ
Published 16 ಆಗಸ್ಟ್ 2020, 15:08 IST
Last Updated 16 ಆಗಸ್ಟ್ 2020, 15:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ಅವಧಿಯಲ್ಲಿ ₹ 18,590 ಕೋಟಿ ಮೌಲ್ಯದ ಚಿನ್ನ ಆಮದಾಗಿದೆ ಎಂದು ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 91,440 ಕೋಟಿ ಮೌಲ್ಯದ ಚಿನ್ನ ಆಮದಾಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇಕಡ 81ರಷ್ಟು ಇಳಿಕೆ ಆಗಿದೆ.

ಕೋವಿಡ್–19 ಸಾಂಕ್ರಾಮಿಕ ಹರಡುತ್ತಿರುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿರುವುದೇ ಆಮದು ಇಳಿಕೆಗೆ ಕಾರಣವಾಗಿದೆ ಎಂದು ಅದು ತಿಳಿಸಿದೆ. ಬೆಳ್ಳಿ ಆಮದು ಸಹ ಶೇ 56.5ರಷ್ಟು ಕಡಿಮೆಯಾಗಿದ್ದು, ₹ 5,185 ಕೋಟಿಗಳಷ್ಟಾಗಿದೆ.

ಚಿನ್ನ, ಬೆಳ್ಳಿ ಆಮದು ಇಳಿಕೆ ಆಗಿರುವುದರಿಂದ ಆಮದು ಮತ್ತು ರಫ್ತು ವಹಿವಾಟಿನ ನಡುವಣ ಅಂತರವಾದ ವ್ಯಾಪಾರ ಕೊರತೆ ₹ 4.42 ಲಕ್ಷ ಕೋಟಿಯಿಂದ ₹ 1.04 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ADVERTISEMENT

ಹರಳು ಮತ್ತು ಚಿನ್ನಾಭರಣ ರಫ್ತು ಶೇ 66ರಷ್ಟು ಇಳಿಕೆಯಾಗಿದ್ದು, ₹ 31,275 ಕೋಟಿಗಳಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.