ನವದೆಹಲಿ: ಚಿನ್ನ ಆಮದು ಮೌಲ್ಯವು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ₹ 2.81 ಲಕ್ಷ ಕೋಟಿಯಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಎರಡು ಪಟ್ಟಿಗಿಂತಲೂ ಹೆಚ್ಚು ಏರಿಕೆ ಆಗಿದೆ.
2020–21ನೇ ಹಣಕಾಸು ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ₹ 1.24 ಲಕ್ಷ ಕೋಟಿ ಮೌಲ್ಯದ ಚಿನ್ನ ಆಮದಾಗಿತ್ತು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
ಚಿನ್ನದ ಆಮದು ಹೆಚ್ಚಾಗಿರುವುದರಿಂದ ವ್ಯಾಪಾರ ಕೊರತೆ ಅಂತರವು ₹ 4.54 ಲಕ್ಷ ಕೋಟಿಯಿಂದ ₹ 10.54 ಲಕ್ಷ ಕೋಟಿಗೆ ಏರಿಕೆ ಆಗಿದೆ. ಬೆಳ್ಳಿ ಆಮದು ಮೌಲ್ಯವು ₹ 5,638 ಕೋಟಿಯಿಂದ ₹ 14,800 ಕೋಟಿಗೆ ಏರಿಕೆ ಆಗಿದೆ. ಹರಳು ಮತ್ತು ಚಿನ್ನಾಭರಣ ರಫ್ತು ಶೇ 71ರಷ್ಟು ಹೆಚ್ಚಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.